ಮೆಟ್ರೋ ಕಥನ - ೫೬
ಕಾಡಿನಲ್ಲಿ ಆಡಳಿತ ಮಂಡಳಿ ರಚನೆಯಾಯಿತು. ಆಯ್ಕೆಯಾದ ಎಲ್ಲಾ ಪ್ರಾಣಿ ಪಕ್ಷಿಗಳಿಗೆ ಅಲ್ಲಲ್ಲೆ ಸನ್ಮಾನ ನಡೆಯುತ್ತಿತ್ತು. ಆಯಾ ಜಾತಿಯ, ಧರ್ಮದ ಪಕ್ಷಗಳು ಅಭಿನಂದಿಸಿಕೊಳ್ಳುತ್ತಿದ್ದವು. ಸೋತ ಜೀವಿಗಳು ನಿಂದನೆಯಲ್ಲೇ ಸಮಾಧಾನ ಮಾಡಿಕೊಳ್ಳುತ್ತಿದ್ದವು. ತಾನೇ ಮಾಡಿದ ತಪ್ಪು, ಇಷ್ಟು ಬೃಹತ್ತಾಗಿ ಬೆಳೆದು, ಕೆಟ್ಟದ್ದೇ ಒಳಿತಾಗಿರುವ ಕ್ರೂರ ಸತ್ಯವನ್ನು ನಿಶಕ್ತವಾದ ಮುದಿಸಿಂಹ ನೋಡುತ್ತಿತ್ತು. ಅಲ್ಲೇ ನೇತು ಹಾಕಿದ್ದ ಕಾಡಿನ ಸಂವಿಧಾನದ ಬೋರ್ಡಿನಲ್ಲಿ ಜಾತ್ಯಾತೀತ, ಧರ್ಮಾತೀತ ಅರಣ್ಯ ಸರ್ವಸಮನ್ವಯತೆಯ ಸಾಲುಗಳು ವಿಜೃಂಭಣೆಯಿಂದ ಕಾಣುತ್ತಿದ್ದವು.
- ಅಂಕುರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ