ಮೆಟ್ರೋ ಕಥನ - ೬೦
ಇವಳು ಯಾವಾಗಲೂ ಹುಡುಕುತ್ತಲೇ ಇದ್ದಾಳೆ. ಅವಳ ಕಣ್ಣೀರು ಹೇಳಿಕೊಳ್ಳಲು ಒಂದು ನಂಬಿಕೆಯ ಜೀವ ಬೇಕಿದೆ. ಮುಖವಾಡಗಳೇ ಸ್ವಾರ್ಥದ ವೇಗದಲ್ಲಿ ಸಾಗುವಾಗ ಅವಳು ನಿತ್ಯ ಮೌನಿಯಾಗಿದ್ದಾಳೆ. ಎಲ್ಲರೊಂದಿಗೂ ಹರಟುವ, ತಿನ್ನುವ, ಸಾಗುವ ಇವಳಿಗೆ ಒಂದು ಸಾಂಗತ್ಯದ ಅಗತ್ಯವಿದೆ. ತಂದೆಯಲ್ಲಿ ಹುಡುಕಿದರೆ ವ್ಯವಹಾರದಲ್ಲೇ ಕಳೆದುಹೋಗಿದ್ದಾರೆ. ತಾಯಿಯೋ ತನ್ನದೇ ಲೋಕಕ್ಕಾಗಿ ಹಪಾಹಪಿಸುತ್ತಿದ್ದಾರೆ. ಸ್ನೇಹಿತರೋ ಒಬ್ಬೊಬ್ಬರು ಒಂದೊಂದು ರೀತಿ. ಲಾಭವೋ, ಸ್ವಾರ್ಥವೋ, ಕಾಮವೋ ಎನೋ ಉಪಯೋಗಿ ಮನಸ್ಸುಗಳ ಕಂಡು ಬೇಸತ್ತಿದ್ದಾಳೆ.
ಇವಳಿಗೆ ಇವಳದೇ ಮನಸ್ಸಿನ ಮತ್ತೊಂದು ಆಲೋಚನೆಯ ಮನಸ್ಸು ಬೇಕಿದೆ. ಇವಳು ಎಲ್ಲಾ ಕಡೆಯೂ ಇದ್ದಾಳೆ. ಎಲ್ಲರೊಳಗೂ ಇದ್ದಾಳೆ.
- ಅಂಕುರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ