ಮೆಟ್ರೋ ಕಥನ - ೬೨
ಮೊಲವೊಂದು ಮಕ್ಕಳನ್ನು ಮಣ್ಣಿನ ಗೂಡಿನಲ್ಲಿ ಮಡಗಿತ್ತು. ಆಹಾರ ಹುಡುಕಿ, ಹೊಟ್ಟೆ ತುಂಬಿಸಿಕೊಂಡು ಬಂದು ಮಣ್ಣು ತೆಗೆದು ಗೂಡಿನಿಂದ ಬರುವ ಮಕ್ಕಳಿಗೆ ಹಾಲುಣಿಸುತ್ತಿತ್ತು. ಎಂದಿನಂತೆ ಆಹಾರಕ್ಕೆ ಹೋದ ಮೊಲವು ತಿಂದದ್ದು ಚಿಗುರೆಲೆ, ಗರಿಕೆ ಅಷ್ಟೇ. ಆದರೆ ಆಚೆ ಬರುವಾಗ ಉರುಳಿಗೆ ಸಿಕ್ಕಿ ನರಳಾಡಿ ಸತ್ತಿತು. ಉರುಳು ಬಿಟ್ಟ ನಾಗರಾಜನ ಮನೆಯಲ್ಲಿ ಮೊಲದ ಮಾಂಸ ಕುದಿಯುತ್ತಿದೆ. ತಾಯಿ ಬರುವ ಆಸೆಯಿಂದ ಮಕ್ಕಳು ಕಾಯುತ್ತಿವೆ.
ಕಾಡಿನಲ್ಲಿ ಅದೆಷ್ಟೋ ತಾಯಿಗಳು ಅನ್ನಕ್ಕಾಗಿ ಹೋಗಿ, ಮತ್ತೊಂದು ಪ್ರಾಣಿಗೆ ಅನ್ನವಾಗುತ್ತವೆ.
ಉರುಳು - ಉಳ್ಳು ಎಂದು ಕರೆಯುವರು. ತೆಳುವಾದ ತಂತಿಯಲ್ಲಿ ನೇಣಿನಂತೆ ಚಿಕ್ಕ ಚಿಕ್ಕ ವೃತ್ತಾಕಾರಗಳ ಜೋಡಣೆಯ ಬಲೆ
- ಅಂಕುರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ